ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರ ಸತತ ಎರಡನೇ ಚಿನ್ನದ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಸಂಭ್ರಮಿಸಿದರು
ಪ್ರಕಟಣಾ ದಿನಾಂಕ:
04 OCT 2023 7:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಸತತ ಎರಡನೇ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ.
"ಏಷ್ಯನ್ ಗೇಮ್ಸ್ ನಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಥ್ರೋನಲ್ಲಿ ಸತತ ಎರಡನೇ ಚಿನ್ನ ಗೆದ್ದಿದ್ದಾರೆ. ಈ ಐತಿಹಾಸಿಕ ಸಾಧನೆಗಾಗಿ ಅವರಿಗೆ ಅಭಿನಂದನೆಗಳು. ಈ ಅದ್ಭುತ ಗೆಲುವು ಅವರ ಸಮರ್ಪಣೆ ಮತ್ತು ವರ್ಷಗಳ ತರಬೇತಿಯ ಫಲಿತಾಂಶವಾಗಿದೆ. ಅವರು ಯಶಸ್ಸಿನ ಹೊಸ ಎತ್ತರವನ್ನು ಏರುತ್ತಲೇ ಇರಲಿ. ಅವರಿಗೆ ಶುಭ ಹಾರೈಕೆಗಳು," ಎಂದಿದ್ದಾರೆ
***
(ಪ್ರಕಟಣೆ ಐ.ಡಿ.: 1964566)
ವಿಸಿಟರ್ ಕೌಂಟರ್ : 121
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Gujarati
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Odia
,
Tamil
,
Telugu
,
Malayalam