ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾಂಪೌಂಡ್ ಬಿಲ್ಲುಗಾರಿಕೆಯಲ್ಲಿ ಬೆಳ್ಳಿ ಪದಕ ಗೆದ್ದ ಅಭಿಷೇಕ್ ವರ್ಮಾ ಅವರನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

प्रविष्टि तिथि: 07 OCT 2023 8:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನ ಕಾಂಪೌಂಡ್ ಆರ್ಚರಿ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಬಿಲ್ಲುಗಾರ ಅಭಿಷೇಕ್ ವರ್ಮಾ ಅವರನ್ನು ಅಭಿನಂದಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:

"@archer_abhishek ಅವರ ಗಮನಾರ್ಹ ಪ್ರದರ್ಶನ. ಕಾಂಪೌಂಡ್ ಬಿಲ್ಲುಗಾರಿಕೆ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ ಮತ್ತು ಕ್ರೀಡಾ ಮನೋಭಾವವು ಪ್ರಕಾಶಮಾನವಾಗಿ ಹೊಳೆಯುತ್ತದೆ ಮತ್ತು ಈ ಸಾಧನೆಯಿಂದ ಭಾರತವು ರೋಮಾಂಚನಗೊಂಡಿದೆ,’’ ಎಂದಿದ್ದಾರೆ.

 

***


(रिलीज़ आईडी: 1965850) आगंतुक पटल : 123
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam