ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ

Posted On: 07 OCT 2023 10:04PM by PIB Bengaluru

ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಚೆಸ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ಕ್ರೀಡಾಕೂಟದಲ್ಲಿ ನಮ್ಮ ಆಟಗಾರರ ಪ್ರದರ್ಶನದಲ್ಲಿ ಅಸಾಧಾರಣ ಪ್ರತಿಭೆ! ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ನಮ್ಮ ಪುರುಷರ ಚೆಸ್ ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

**********


(Release ID: 1965862) Visitor Counter : 108