ಪ್ರಧಾನ ಮಂತ್ರಿಯವರ ಕಛೇರಿ
ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ನೊಂದಿಗೆ ದೃಢವಾಗಿ ನಿಂತಿದ್ದಾರೆ: ಪ್ರಧಾನಮಂತ್ರಿ
Posted On:
10 OCT 2023 4:07PM by PIB Bengaluru
ತಮ್ಮ ದೇಶದಲ್ಲಿನ ಪ್ರಸಕ್ತ ಸ್ಥಿತಿಗತಿ ಕುರಿತು ತಾಜಾ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನ ಸಹವರ್ತಿ ಬೆಂಜಮಿನ್ ನೇತಾನ್ಯಾಹು ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಎಲ್ಲ ಸ್ವರೂಪದ ಭಯೋತ್ಪಾದನಾ ಕೃತ್ಯಗಳನ್ನು ಖಂಡಿಸಿರುವ ಪ್ರಧಾನಿ ಅವರು, ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಗೆ ಒಗ್ಗಟ್ಟು ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಅವರ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಸದ್ಯ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಾಜಾ ಮಾಹಿತಿಯನ್ನು ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ. ಭಾರತವು ಎಲ್ಲಾ ಸ್ವರೂಪದ ಭಯೋತ್ಪಾದನೆಯನ್ನು ಮತ್ತು ಅದನ್ನು ಅಭಿವ್ಯಕ್ತಿಗೊಳಿಸುವುದನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ."
***
(Release ID: 1966292)
Visitor Counter : 131
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam