ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಸ್ರೇಲ್ ಪ್ರಧಾನಮಂತ್ರಿಯವರ ಜೊತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದರು.


ಇಸ್ರೇಲ್ ನಲ್ಲಿ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ಪ್ರಧಾನಮಂತ್ರಿಯವರು ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ನಿಂತಿದ್ದಾರೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಭಾರತವು ಭಯೋತ್ಪಾದನೆಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿಯವರು ಪುನರುಚ್ಚರಿಸಿದ್ದಾರೆ.

ಇಸ್ರೇಲ್ ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಇಸ್ರೇಲ್ ಪ್ರಧಾನಮಂತ್ರಿ ಶ್ರೀ ನೆತನ್ಯಾಹು ಅವರು ಪ್ರಧಾನಮಂತ್ರಿಯವರಿಗೆ ಭರವಸೆ ನೀಡಿದರು.

Posted On: 10 OCT 2023 5:09PM by PIB Bengaluru

ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದರು. 

ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ಆಳವಾದ ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಈ ಕಷ್ಟದ ಸಮಯದಲ್ಲಿ ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ಭಾರತದ ಜನರು ನಿಂತಿದ್ದಾರೆ ಎಂದು ತಿಳಿಸಿದರು.

ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಾರತವು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿಯವರು  ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.


ಇಸ್ರೇಲ್ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ವಿಷಯವನ್ನು ಪ್ರಧಾನಮಂತ್ರಿಯವರು ಚರ್ಚಿಸಿದರು. ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರು ಭಾರತೀಯರ ಸುರಕ್ಷತೆ ಮತ್ತ ುರಕ್ಷಣೆ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ಮತ್ತು ಬೆಂಬಲದ ಭರವಸೆ ನೀಡಿದರು.

ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.


*** ***


(Release ID: 1966400) Visitor Counter : 126