ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಈಶಾನ್ಯ ಎಕ್ಸ್‌ಪ್ರೆಸ್‌ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಜೀವಹಾನಿ ಸಂಭವಿಸಿದ ಕುರಿತು ಸಂತಾಪ ಸೂಚಿಸಿದ ಪ್ರಧಾನಮಂತ್ರಿಯವರು 

Posted On: 12 OCT 2023 12:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈಶಾನ್ಯ ಎಕ್ಸ್‌ಪ್ರೆಸ್‌ನ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಜೀವಹಾನಿ ಸಂಭವಿಸಿದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನೂ ಅಧಿಕಾರಿಗಳು ನೀಡುತ್ತಿದ್ದಾರೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಈಶಾನ್ಯ ಎಕ್ಸ್‌ಪ್ರೆಸ್‌ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಕೆಲವರು ಪ್ರಾಣ ಕಳೆದುಕೊಂಡಿರುವುದು ಅತೀವ ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಎಲ್ಲಾ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನೂ ಅಧಿಕಾರಿಗಳು ನೀಡುತ್ತಿದ್ದಾರೆ” 

 

Pained by the loss of lives due to the derailment of a few coaches of the North East Express. Condolences to the bereaved families. I pray for a quick recovery of the injured. Authorities are providing all possible assistance to all those affected: PM @narendramodi

— PMO India (@PMOIndia) October 12, 2023

***


(Release ID: 1967010) Visitor Counter : 109