ಪ್ರಧಾನ ಮಂತ್ರಿಯವರ ಕಛೇರಿ

ಛತ್ರಪತಿ ಸಂಭಾಜಿನಗರದಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್ಆರ್ ಎಫ್ ನಿಂದ  ಪರಿಹಾರ ಘೋಷಣೆ

Posted On: 15 OCT 2023 9:31AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ಹಾರೈಸಿದರು.

ಪಿ.ಎಂ.ಎನ್.ಆರ್.ಎಫ್. ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದರು.

ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

"ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ನೋವುಂಟು ಮಾಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡಲಾಗುವುದು: ಪ್ರಧಾನಿ @narendramodi,’’



(Release ID: 1967911) Visitor Counter : 89