ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಗನಯಾನದ ಟಿವಿ ಡಿ1 ಮಿಷನ್ ನ ಪ್ರಯೋಗಾರ್ಥ ಪರೀಕ್ಷೆ ಯಶಸ್ಸಿಗೆ ಪ್ರಧಾನಮಂತ್ರಿ ಶ್ಲಾಘನೆ

प्रविष्टि तिथि: 21 OCT 2023 12:56PM by PIB Bengaluru

ಗಗನಯಾನದ ಟಿವಿ ಡಿ1 ಮಿಷನ್ ನ ಪ್ರಯೋಗಾರ್ಥ ಪರೀಕ್ಷೆ ಯಶಸ್ಸಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ ಮತ್ತು ಇದು ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವನ್ನು ಸಾಕಾರಗೊಳಿಸಲು ದೇಶವನ್ನು ಒಂದು ಹೆಜ್ಜೆ ಸನಿಹಕ್ಕೆ ಕೊಂಡೊಯ್ಯಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. 

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿಯವರು: 

“ಈ ಉಡಾವಣೆಯು ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವಾದ ಗಗನಯಾನವನ್ನು ಸಾಕಾರಗೊಳಿಸಲು ನಮ್ಮನ್ನು ಒಂದು ಹೆಜ್ಜೆ ಸನಿಹಕ್ಕೆ ಕೊಂಡೊಯ್ಯುತ್ತದೆ. ಇಸ್ರೋದ ನಮ್ಮ ವಿಜ್ಞಾನಿಗಳಿಗೆ ಶುಭಾಶಯಗಳು” ಎಂದಿದ್ದಾರೆ.


(रिलीज़ आईडी: 1969739) आगंतुक पटल : 188
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam