ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

प्रविष्टि तिथि: 23 OCT 2023 1:15PM by PIB Bengaluru

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮರಿಯಪ್ಪನ್ ತಂಗವೇಲು ಅವರಿಗೆ ಅಭಿನಂದನೆಗಳು! ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಬೆಳ್ಳಿ ಪದಕವು ಅವರ ಅದ್ಭುತ ಪ್ರತಿಭೆ ಮತ್ತು ಶ್ರದ್ಧೆಗೆ ಸಾಕ್ಷಿಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು'' ಎಂದು ಬರೆದಿದ್ದಾರೆ.


(रिलीज़ आईडी: 1970114) आगंतुक पटल : 123
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu