ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಅವರು ಚಿನ್ನದ ಪದಕ ಗಳಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದರು
प्रविष्टि तिथि:
23 OCT 2023 6:49PM by PIB Bengaluru
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪ್ರವೀಣ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“ಏಷ್ಯನ್ ಪ್ಯಾರಾ ಗೇಮ್ಸ್ನ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಅವರಿಂದ ಅತ್ಯುತ್ತಮ ಕ್ರೀಡಾ ಪ್ರದರ್ಶನ. ಅವರು ಚಿನ್ನದ ಪದಕ ಗೆದ್ದಿರುವುದು ಬಹಳ ಸಂತಸ ತಂದಿದೆ. ಅವರ ಅಚಲ ನಿರ್ಧಾರ ಮತ್ತು ಕಠಿಣ ಪರಿಶ್ರಮಕ್ಕೆ ಅವರ ಯಶಸ್ಸು ಸಾಕ್ಷಿಯಾಗಿದೆ. ಅವರು ಇನ್ನೂ ಎತ್ತರಕ್ಕೆ ಏರಲಿ ಮತ್ತು ಸಾಧನೆಗಳೊಂದಿಗೆ ಇನ್ನೂ ಅನೇಕರನ್ನು ಅವರು ಪ್ರೇರೇಪಿಸಲಿ!
***
(रिलीज़ आईडी: 1971304)
आगंतुक पटल : 141
इस विज्ञप्ति को इन भाषाओं में पढ़ें:
Malayalam
,
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu