ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
22 OCT 2023 11:23PM by PIB Bengaluru
ಪುರುಷರ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಅದ್ಭುತ ವಿಜಯಕ್ಕಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ;
“ನ್ಯೂಜಿಲೆಂಡ್ ವಿರುದ್ಧದ ಅದ್ಭುತ ವಿಜಯಕ್ಕಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು! ಇದು ನಮ್ಮ ತಂಡದ ಉತ್ತಮ ಪ್ರಯತ್ನವಾಗಿದ್ದು, ಎಲ್ಲರೂ ಕೊಡುಗೆ ನೀಡಿದ್ದಾರೆ. ತಂಡದ ಕ್ರಿಕೆಟ್ ಮೈದಾನದಲ್ಲಿನ ಸಮರ್ಪಣೆ ಮತ್ತು ಕೌಶಲ್ಯವು ಅನುಕರಣೀಯವಾಗಿದೆ.”
***
(Release ID: 1971344)
Visitor Counter : 94
Read this release in:
Malayalam
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu