ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳಾ ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ಪೂಜಾಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
25 OCT 2023 9:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ ಡಿಸ್ಕಸ್ ಥ್ರೋ-ಎಫ್ 54/55 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪೂಜಾ ಅವರನ್ನು ಅಭಿನಂದಿಸಿದ್ದಾರೆ.
ಅವರ ಸಮರ್ಪಣೆ ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದೆ ಎಂದು ಅವರು ಹೇಳಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
‘‘ ಮಹಿಳಾ ಡಿಸ್ಕಸ್ ಥ್ರೋ-ಎಫ್ 54/55 ಸ್ಪರ್ಧೆಯಲ್ಲಿ ಪೂಜಾ ಅವರ ಅದ್ಭುತ ಪ್ರದರ್ಶನ. ಅವರ ಸಮರ್ಪಣೆ ಮತ್ತು ಪರಾಕ್ರಮವು ಪ್ರಕಾಶಮಾನವಾಗಿ ಹೊಳೆಯುತ್ತಿದೆ, ಭಾರತ ಮತ್ತೊಂದು ಹೆಮ್ಮೆಯ ಕ್ಷಣವನ್ನು ಕಂಡಿದೆ. ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು,’’ ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1971874)
ವಿಸಿಟರ್ ಕೌಂಟರ್ : 134
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu