ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 1500 ಮೀಟರ್-ಟಿ 13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶಂಕರಪ್ಪ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
ಪ್ರಕಟಣಾ ದಿನಾಂಕ:
25 OCT 2023 10:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 1500 ಮೀಟರ್-ಟಿ13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಶಂಕರಪ್ಪ ಅವರನ್ನು ಅಭಿನಂದಿಸಿದರು.
ಶಂಕರಪ್ಪ ಅವರ ಸಾಧನೆ ಮತ್ತು ಸಮರ್ಪಣೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸ್ಫೂರ್ತಿಯಾಗಿದೆ ಎಂದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
‘‘ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 1500 ಮೀಟರ್-ಟಿ 13 ರಲ್ಲಿ ಬೆಳ್ಳಿ ಪದಕ ಗೆದ್ದ ಶಂಕರಪ್ಪ ಅವರಿಗೆ ಅಭಿನಂದನೆಗಳು. ಅವರ ಅದ್ಭುತ ಪ್ರದರ್ಶನ ಮತ್ತು ಸಮರ್ಪಣೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು,’’ಎಂದು ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1971891)
ವಿಸಿಟರ್ ಕೌಂಟರ್ : 98
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam