ಪ್ರಧಾನ ಮಂತ್ರಿಯವರ ಕಛೇರಿ
ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು
ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಆರಂಭಿಕ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಕುರಿತು ಹೆಚ್ಚಿನ ಒತ್ತು ನೀಡಿದರು
प्रविष्टि तिथि:
23 OCT 2023 7:07PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪಶ್ಚಿಮ ಏಷ್ಯಾ ಪ್ರದೇಶದ ಅಭಿವೃದ್ಧಿ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳವನ್ನು ಕೂಡಾ ಶ್ರೀ ಮೋದಿಯವರು ವ್ಯಕ್ತಪಡಿಸಿದರು ಮತ್ತು ಭದ್ರತೆ ಹಾಗೂ ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಬಗ್ಗೆ ಒತ್ತಿ ಹೇಳಿದರು.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದರು. ಪಶ್ಚಿಮ ಏಷ್ಯಾ ಪ್ರದೇಶದ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಆರಂಭಿಕ ಪರಿಹಾರಕ್ಕಾಗಿ ಶೀಘ್ರ ಸಂಘಟಿತ ಪ್ರಯತ್ನಗಳ ಅಗತ್ಯವಿದೆ.”
***
(रिलीज़ आईडी: 1971971)
आगंतुक पटल : 134
इस विज्ञप्ति को इन भाषाओं में पढ़ें:
Tamil
,
Odia
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Telugu
,
Malayalam