ಪ್ರಧಾನ ಮಂತ್ರಿಯವರ ಕಛೇರಿ

​​​​​​​ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆಯು ಐತಿಹಾಸಿಕ ಶತಕ ತಲುಪಿದ್ದಕ್ಕಾಗಿ ಪ್ರಧಾನಿ ಸಂತಸ

Posted On: 28 OCT 2023 11:41AM by PIB Bengaluru

ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು 100ನೇ ಪದಕವನ್ನು ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.

ಅವರು ಐತಿಹಾಸಿಕ ಸಾಧನೆಗಾಗಿ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಶ್ಲಾಘಿಸಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ  ಸಂದೇಶ ನೀಡಿದ್ದಾರೆ.

"ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪ್ರತಿಮ ಸಂತೋಷದ ಕ್ಷಣ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ.

ಈ ಗಮನಾರ್ಹ ಮೈಲಿಗಲ್ಲು ನಮಗೆ ಅಪಾರ ಹೆಮ್ಮೆಯನ್ನು ತುಂಬುತ್ತದೆ. ನಮ್ಮ ಕ್ರೀಡಾಪಟುಗಳು, ತರಬೇತುದಾರರು ಮತ್ತು ಅವರೊಂದಿಗೆ ಕೆಲಸ ಮಾಡುವ ಸಹಾಯಕ ಸಿಬ್ಬಂದಿಗೆ ನಾನು ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಈ ವಿಜಯಗಳು ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತವೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಈ ಕ್ರೀಡಾಪಟುಗಳು ತೋರಿಸಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

 

****



(Release ID: 1972608) Visitor Counter : 54