ಪ್ರಧಾನ ಮಂತ್ರಿಯವರ ಕಛೇರಿ

ಏಷ್ಯನ್ ಪ್ಯಾರಾ ಗೇಮ್ಸ್‌ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ಸುಹಾಸ್ ಎಲ್. ಯತಿರಾಜ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು

Posted On: 27 OCT 2023 7:41PM by PIB Bengaluru

ಹ್ಯಾಂಗ್‌ಜೌನಲ್ಲಿ ನಡೆದಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್-4 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸುಹಾಸ್ ಎಲ್. ಯತಿರಾಜ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಸಂಬಂಧ "ಎಕ್ಸ್‌" ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್‌-4 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸುಹಾಸ್ ಎಲ್. ಯತಿರಾಜ್ ಅವರಿಗೆ ಅಭಿನಂದನೆಗಳು! ಅವರು ಅಪ್ರತಿಮ ಬದ್ಧತೆ ಹಾಗೂ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಈ ಸಾಧನೆಯು ಅವರ ಪಟ್ಟುಬಿಡದ ಉತ್ಸಾಹ ಮತ್ತು ಶ್ರಮವನ್ನು ಪ್ರತಿಬಿಂಬಿಸುತ್ತದೆ,ʼʼ ಎಂದು ಬಣ್ಣಿಸಿದ್ದಾರೆ.

 

****



(Release ID: 1972916) Visitor Counter : 57