ಪ್ರಧಾನ ಮಂತ್ರಿಯವರ ಕಛೇರಿ

ಏಷ್ಯನ್ ಪ್ಯಾರಾ ಗೇಮ್ಸ್‌-2022 ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ತುಳಸಿಮತಿ ಮುರುಗೇಶನ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 27 OCT 2023 7:39PM by PIB Bengaluru

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ  ಏಷ್ಯನ್ ಪ್ಯಾರಾ ಗೇಮ್ಸ್‌-2022ರ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ಎಸ್ ಯು5 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ:

"ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ಎಸ್ ಯು5 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ತುಳಸಿಮತಿ ಮುರುಗೇಶನ್ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಹೆಮ್ಮೆ ಪಡುವಂತೆ ಮಾಡಿದೆ. ಇದು ಮುಂಬರುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರೇರೇಪಣೆ ನೀಡುತ್ತದೆ" ಎಂದು ಪ್ರಶಂಶಿಸಿದ್ದಾರೆ.
 

****



(Release ID: 1972927) Visitor Counter : 69