ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದ ಶೀತಲ್ ದೇವಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
27 OCT 2023 5:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬಿಲ್ಲುಗಾರಿಕೆ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೀತಲ್ ದೇವಿ ಅವರನ್ನು ಅಭಿನಂದಿಸಿದರು.
ಅವರ ಸಾಧನೆಯು ಅವರ ಧೈರ್ಯ ಮತ್ತು ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಆರ್ಚರಿ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ಸ್ಪರ್ಧೆಯಲ್ಲಿ ಅಸಾಧಾರಣ ಚಿನ್ನದ ಪದಕ ಗೆದ್ದ ಶೀತಲ್ ದೇವಿ ಬಗ್ಗೆ ಹೆಮ್ಮೆ ಇದೆ. ಈ ಸಾಧನೆಯು ಅವರ ಧೈರ್ಯ ಮತ್ತು ದೃಢನಿಶ್ಚಯಕ್ಕೆ ಸಾಕ್ಷಿಯಾಗಿದೆ,’’ ಎಂದು ಹೇಳಿದ್ದಾರೆ.
****
(ಪ್ರಕಟಣೆ ಐ.ಡಿ.: 1972934)
ವಿಸಿಟರ್ ಕೌಂಟರ್ : 118
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam