ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಭಾಗವಹಿಸಿದ ಭಾರತೀಯ ಅಥ್ಲೀಟ್‌ಗಳ ತಂಡದೊಂದಿಗೆ ನವೆಂಬರ್ 1 ರಂದು ಸಂವಾದ ನಡೆಸಲಿರುವ ಮತ್ತು ಅವರನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿಯವರು
Posted On:
31 OCT 2023 5:04PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 1, 2023 ರಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ ಸುಮಾರು 4:30 ಕ್ಕೆ ಭಾರತದ ಏಷ್ಯನ್ ಪ್ಯಾರಾ ಗೇಮ್ಸ್ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಕ್ರೀಡಾಳುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕಾರ್ಯಕ್ರಮವು ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಮುಂಬರುವ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಪ್ರಧಾನಮಂತ್ರಿಯವರು ಕೈಗೊಂಡ ಪ್ರಯತ್ನವಾಗಿದೆ. ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಭಾರತವು 29 ಚಿನ್ನದ ಪದಕಗಳು ಸೇರಿದಂತೆ ಒಟ್ಟು 111 ಪದಕಗಳನ್ನು ಗೆದ್ದಿದೆ. ಹಿಂದಿನ ಅತ್ಯುತ್ತಮ ಪ್ರದರ್ಶನಕ್ಕೆ (2018 ರಲ್ಲಿ) ಹೋಲಿಸಿದಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಒಟ್ಟು ಪದಕಗಳ ಸಂಖ್ಯೆಯಲ್ಲಿ 54% ರಷ್ಟು ವೃದ್ಧಿಯಾಗಿದೆ; ಮತ್ತು ಗೆದ್ದ 29 ಚಿನ್ನದ ಪದಕಗಳ ಸಂಖ್ಯೆ 2018 ರಲ್ಲಿ ಗೆದ್ದ ಪದಕ ಸಂಖ್ಯೆಗಿಂತ ದುಪ್ಪಟ್ಟಾಗಿದೆ.
ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ಅವರ ತರಬೇತುದಾರರು, ಭಾರತೀಯ ಪ್ಯಾರಾಲಿಂಪಿಕ್ ಸಮೀತಿ ಮತ್ತು ಭಾರತೀಯ ಒಲಿಂಪಿಕ್ ಒಕ್ಕೂಟದ ಅಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟದ ಪ್ರತಿನಿಧಿಗಳು ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
****
(Release ID: 1973484)
Visitor Counter : 119
Read this release in:
Tamil
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam