ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 01 NOV 2023 12:44PM by PIB Bengaluru

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ:

" ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ"   ಎಂದಿದ್ದಾರೆ.

*****


(रिलीज़ आईडी: 1973881) आगंतुक पटल : 129
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Malayalam