ಪ್ರಧಾನ ಮಂತ್ರಿಯವರ ಕಛೇರಿ
ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ನಷ್ಟಕ್ಕೆ ಪ್ರಧಾನ ಮಂತ್ರಿ ದುಃಖ
प्रविष्टि तिथि:
04 NOV 2023 10:29AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ನಷ್ಟಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತವು ನೇಪಾಳ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ, ಸಾಧ್ಯವಿರುವ ಎಲ್ಲ ಸಹಾಯ ನೀಡಲು ಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು;
“ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಪ್ರಾಣ ಹಾನಿ ಮತ್ತು ನಷ್ಟದಿಂದ ತೀವ್ರ ದುಃಖವಾಗಿದೆ. ಭಾರತವು ನೇಪಾಳದ ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಂತಿದೆ, ಸಾಧ್ಯವಿರುವ ಎಲ್ಲ ಸಹಾಯ ಮತ್ತು ನೆರವು ನೀಡಲು ಸಿದ್ಧವಾಗಿದೆ. ದುಃಖತಪ್ತ ಕುಟುಂಬಗಳೊಂದಿಗೆ ನಾವು ಇದ್ದೇವೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ@cmprachanda" ಎಂದಿದ್ದಾರೆ.
(रिलीज़ आईडी: 1974729)
आगंतुक पटल : 157
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam