ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ

प्रविष्टि तिथि: 05 NOV 2023 10:22PM by PIB Bengaluru

ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಅದ್ಭುತವಾಗಿ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿಯವರನ್ನು ಸಹ ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ. 

ಟ್ವಿಟ್ಟರ್ ನಲ್ಲಿ ಪ್ರಧಾನ ಮಂತ್ರಿಗಳು,

"ನಮ್ಮ ಕ್ರಿಕೆಟ್ ತಂಡವು ಮತ್ತೊಮ್ಮೆ ವಿಜಯಶಾಲಿಯಾಗಿದೆ! ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ತೋರಿಸಿದ ತಂಡಕ್ಕೆ ಅಭಿನಂದನೆಗಳು. ಉತ್ತಮ ತಂಡದ ಪ್ರಯತ್ನ.

ಇಂದು ಉತ್ತಮವಾಗಿ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿಗೆ ತಂಡದ ಆಟಗಾರರು ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆ ನೀಡಿದ್ದಾರೆ.'' ಎಂದು ಬರೆದುಕೊಂಡಿದ್ದಾರೆ.

****


(रिलीज़ आईडी: 1974981) आगंतुक पटल : 130
इस विज्ञप्ति को इन भाषाओं में पढ़ें: Urdu , English , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam