ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಗಳು

प्रविष्टि तिथि: 06 NOV 2023 6:23PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು "ಏಷ್ಯನ್ ಚಾಂಪಿಯನ್ಸ್ ಟ್ರೋಫಿ- 2023ʼ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ "ಎಕ್ಸ್‌" ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"ಭಾರತದ ನಾರಿ ಶಕ್ತಿ ಮತ್ತೊಮ್ಮೆ ಅನಾವರಣಗೊಂಡಿದೆ! "ಏಷ್ಯನ್ ಚಾಂಪಿಯನ್ಸ್ ಟ್ರೋಫಿ- 2023ʼರ ಪಂದ್ಯಾವಳಿಯಲ್ಲಿ ಪ್ರತಿಷ್ಠಿತ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡ ನಮ್ಮ ಹಾಕಿ ತಂಡಕ್ಕೆ ಅಭಿನಂದನೆಗಳು! ಅವರ ಅತ್ಯುತ್ತಮ ಕೌಶಲ್ಯ, ಅಚಲವಾದ ಉತ್ಸಾಹ ಮತ್ತು ಪಟ್ಟುಬಿಡದ ಪ್ರಯತ್ನವು  ನಿಜಕ್ಕೂ ನಮ್ಮ ಹೃದಯ ಹೆಮ್ಮೆ ಒಡುವಂತೆ  ಮಾಡಿದೆ.

ಅಂತರರಾಷ್ಟ್ರೀಯ ವೇದಿಕೆಯಲ್ಲಿ ರಾಷ್ಟ್ರದ ವೈಭವವನ್ನು ಹೆಚ್ಚಿಸಿದ್ದಕ್ಕಾಗಿ ಚಾಂಪಿಯನ್‌ಗಳಿಗೆ ಅಭಿನಂದನೆ!ʼ ಎಂದು ಶುಭ ಕೋರಿದ್ದಾರೆ

 

***

 

 


(रिलीज़ आईडी: 1975315) आगंतुक पटल : 110
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam