ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಧನ್ ತೇರಸ್ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

प्रविष्टि तिथि: 10 NOV 2023 8:56AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯ ಸಂಕೇತ ಹಬ್ಬವಾದ ಧನ್ ತೇರಸ್ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಧನ್ ತೇರಸ್ ಶುಭ ಸಂದರ್ಭದಲ್ಲಿ ಭಗವಾನ್ ಧನ್ವಂತರಿಯ ಆಶೀರ್ವಾದವನ್ನು ಕೋರಿರುವ ಅವರು, ದೇಶದ ಎಲ್ಲಾ ನಾಗರಿಕರು ಆರೋಗ್ಯವಾಗಿ, ಸಮೃದ್ಧವಾಗಿ ಮತ್ತು ಸಂತೋಷದಿಂದ ಇರಬೇಕೆಂದು ಆಶಿಸಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವು ಹೊಸ ಶಕ್ತಿಯನ್ನು ಪಡೆಯುತ್ತದೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. 

“ಜೀವನದಲ್ಲಿ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ಸಂಕೇತಿಸುವ ಹಬ್ಬವಾದ ಧನ್ ತೇರಸ್ ಸಂದರ್ಭದಲ್ಲಿ ದೇಶದ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಅಭಿನಂದನೆಗಳು. ಭಗವಂತ ಧನ್ವಂತರಿಯ ಕೃಪೆಯಿಂದ ನೀವೆಲ್ಲರೂ ಯಾವಾಗಲೂ ಆರೋಗ್ಯವಂತರಾಗಿ, ಸಮೃದ್ಧಿಯಾಗಿ ಮತ್ತು ಸಂತೋಷದಿಂದ ಇರಬೇಕೆಂದು ನಾನು ಬಯಸುತ್ತೇನೆ, ಇದರಿಂದ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವು ಹೊಸ ಶಕ್ತಿಯನ್ನು ಪಡೆಯುತ್ತದೆ'' ಎಂದು ಬರೆದಿದ್ದಾರೆ.

*********


(रिलीज़ आईडी: 1976104) आगंतुक पटल : 123
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam