ಪ್ರಧಾನ ಮಂತ್ರಿಯವರ ಕಛೇರಿ

​​​​​​​ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ


ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರ ಸಮಾಲೋಚನೆ

ಅವರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವ ಹಾನಿಯ ಬಗ್ಗೆ ಕಾಳಜಿಯನ್ನು ಹಂಚಿಕೊಂಡರು  ಮತ್ತು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು

ಜಿ20 ರ ಬ್ರೆಜಿಲ್ ಅಧ್ಯಕ್ಷತೆಗೆ ಭಾರತದ ಸಂಪೂರ್ಣ ಬೆಂಬಲವನ್ನು ತಿಳಿಸಿದ ಪ್ರಧಾನಿ

ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳ ಬಗ್ಗೆ ಅವರು ಚರ್ಚಿಸಿದರು

Posted On: 10 NOV 2023 8:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಳವಳ ಹಂಚಿಕೊಂಡರು.

ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಪ್ರಾಣಹಾನಿ ಬಗ್ಗೆ ಉಭಯ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದರು ಮತ್ತು ಪರಿಸ್ಥಿತಿಯನ್ನು ಶೀಘ್ರವಾಗಿ ಬಗೆಹರಿಸಲು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು.

ಜಿ 20 ರ ಬ್ರೆಜಿಲ್ ಅಧ್ಯಕ್ಷತೆಯ ಯಶಸ್ಸಿಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ತಿಳಿಸಿದರು.

ಹೊಸದಿಲ್ಲಿಯಲ್ಲಿ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಅದರ ನೇಪಥ್ಯದಲ್ಲಿ ನಡೆದ ಸಭೆಯ ಹಿನ್ನೆಲೆಯಲ್ಲಿ  ಆ ಬಳಿಕ  ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು.

*****



(Release ID: 1976584) Visitor Counter : 66