ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ನ ರಾಂಚಿಯಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಮೆಮೋರಿಯಲ್ ಪಾರ್ಕ್ ಮತ್ತು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

प्रविष्टि तिथि: 15 NOV 2023 2:55PM by PIB Bengaluru

ಜಾರ್ಖಂಡ್ ನ ರಾಂಚಿಯಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಪಾರ್ಕ್ ಮತ್ತು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;     

“रांची में भगवान बिरसा मुंडा संग्रहालय जाकर उन्हें पुष्पांजलि अर्पित की।”    

 


 

ಪ್ರಧಾನಮಂತ್ರಿಯವರೊಂದಿಗೆ ಜಾರ್ಖಂಡ್ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್, ಜಾರ್ಖಂಡ್ ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್ ಮತ್ತು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡಾ ಉಪಸ್ಥಿತರಿದ್ದರು

***


(रिलीज़ आईडी: 1977100) आगंतुक पटल : 287
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam