ಪ್ರಧಾನ ಮಂತ್ರಿಯವರ ಕಛೇರಿ

50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದ ವಿರಾಟ್ ಕೊಹ್ಲಿಯವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 15 NOV 2023 6:43PM by PIB Bengaluru

ವಿರಾಟ್ ಕೊಹ್ಲಿ ಅವರು 50 ಏಕದಿನ ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ಇಂದು, ವಿರಾಟ್ ಕೊಹ್ಲಿ ತಮ್ಮ  50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿದ್ದಾರೆ ಮಾತ್ರವಲ್ಲ, ಜೊತೆಗೆ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ಅಭಿವ್ಯಕ್ತಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ.

ಸಾಧನೆಯ ಹಾದಿಯಲ್ಲಿ ಈ ಗಮನಾರ್ಹ ಮೈಲಿಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ವಿಶೇಷ ಪ್ರತಿಭೆಗೆ ಸಾಕ್ಷಿಯಾಗಿದೆ.

ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಇದೇ ರೀತಿಯ ಕ್ರೀಡಾ ಸಾಧನೆಯ ಮಾನದಂಡಗಳನ್ನು ಸ್ಥಾಪಿಸುವುದನ್ನು ಮುಂದುವರಿಸಲಿ. ”

 

***



(Release ID: 1977346) Visitor Counter : 66