ಪ್ರಧಾನ ಮಂತ್ರಿಯವರ ಕಛೇರಿ

"ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ನಿಲ್ಲುತ್ತೇವೆ," ಎಂದು ಭಾರತ ತಂಡಕ್ಕೆ ಪ್ರಧಾನಮಂತ್ರಿ ಹೇಳಿದರು

Posted On: 19 NOV 2023 9:40PM by PIB Bengaluru

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಪ್ರದರ್ಶನವನ್ನು ಪ್ರಧಾನಮಂತ್ರಿ ಅವರು ಇಂದು ಶ್ಲಾಘಿಸಿದರು.

ಪಂದ್ಯಾವಳಿಯುದ್ದಕ್ಕೂ ಅಜೇಯ ಪ್ರದರ್ಶನದ ನಂತರ ತಂಡವು ವಿಶ್ವಕಪ್ ನ ಫೈನಲ್ ನಲ್ಲಿ ಸೋತಾಗ, ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

"ಪ್ರೀತಿಯ ಟೀಮ್ ಇಂಡಿಯಾ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ.

ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ನಿಲ್ಲುತ್ತೇವೆ,’’ ಎಂದು ಹೇಳಿದ್ದಾರೆ.

***



(Release ID: 1978106) Visitor Counter : 61