ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 27 NOV 2023 10:01AM by PIB Bengaluru

ಆಂಧ್ರಪ್ರದೇಶದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು. 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಅವರು ತಿರುಮಲದ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವನ್ನು ಸಹ ಕೋರಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಕೆಲವು ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದೇನೆ. ”

“140 కోట్ల మంది భారతీయులకు మంచి ఆరోగ్యం, శ్రేయస్సు మరియు అభివృద్ధి కలగాలని తిరుమలలోని శ్రీ వేంకటేశ్వర స్వామి ఆలయంలో ప్రార్థించాను.”

 
ಈ ಪ್ರಾರ್ಥನೆಯ ಸಂದರ್ಭದ ಕೆಲವು ಛಾಯಾಚಿತ್ರಗಳನ್ನು ಪ್ರಧಾನಮಂತ್ರಿಯವರು ಹಂಚಿಕೊಂಡರು.

ಅವರು ಈ ರೀತಿ ಸಂದೇಶವನ್ನು ಹಂಚಿಕೊಂಡಿದ್ದಾರೆ:
“ಓಂ ನಮೋ ವೆಂಕಟೇಶಾಯ!

ತಿರುಮಲದಿಂದ ಇನ್ನೂ ಕೆಲವು ಛಾಯಾಚಿತ್ರಗಳು.
“ఓం నమో వేంకటాశాయ!
తిరుమల నుండి మరికొన్ని దృశ్యాలు.”

*** ***


(Release ID: 1980291) Visitor Counter : 77