ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತಿನ ಹಿರಿಯ ಛಾಯಾಚಿತ್ರ ಪತ್ರಕರ್ತ ಜವೇರಿಲಾಲ್ ಮೆಹ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿಗಳ ಸಂತಾಪ
Posted On:
27 NOV 2023 10:23PM by PIB Bengaluru
ಗುಜರಾತಿನ ಹಿರಿಯ ಛಾಯಾಚಿತ್ರ ಪತ್ರಕರ್ತ ಶ್ರೀ ಜವೇರಿಲಾಲ್ ಮೆಹ್ತಾ ಅವರು ಇಂದು ನಿಧನರಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜವೇರಿಲಾಲ್ ಮೆಹ್ತಾ ಅವರು ತಮ್ಮ ಸುದೀರ್ಘ ಮತ್ತು ವಿಶಿಷ್ಟ ವೃತ್ತಿಜೀವನದಲ್ಲಿ ಛಾಯಾಚಿತ್ರ ಪತ್ರಿಕೋದ್ಯಮ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪ್ರಧಾನಮಂತ್ರಿಗಳು ಸ್ಮರಿಸಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳು 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ.
"ಗುಜರಾತ್‌ನ ಹೆಸರಾಂತ ಫೋಟೋ ಜರ್ನಲಿಸ್ಟ್ ಝವೇರಿಲಾಲ್ ಮೆಹ್ತಾ ಅವರ ಸಾವಿನ ಸುದ್ದಿ ಕೇಳಿ ತೀವ್ರ ದುಃಖವಾಗಿದೆ.
ವೃತ್ತಪತ್ರಿಕೆ ಮಾಧ್ಯಮದಲ್ಲಿನ ಸುದೀರ್ಘ ವೃತ್ತಿಜೀವನದಲ್ಲಿ ಫೋಟೋ ಜರ್ನಲಿಸಂ ಕ್ಷೇತ್ರಕ್ಕೆ ಅವರ ನೀಡಿರುವ ಕೊಡುಗೆ ಸದಾ ಸ್ಮರಣೀಯ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವ ಜತೆಗೆ ಅಗಲಿದವರ ಕುಟುಂಬಕ್ಕೆ ಸಾಂತ್ವನ ಹೇಳಬಯಸುತ್ತೇನೆ. ಓಂ ಶಾಂತಿ...!" ಎಂದು ಸಂತಾಪ ಸಲ್ಲಿಸಿದ್ದಾರೆ
***
(Release ID: 1980305)
Visitor Counter : 73
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam