ಸಂಸದೀಯ ವ್ಯವಹಾರಗಳ ಸಚಿವಾಲಯ
azadi ka amrit mahotsav

ಸಂಸದೀಯ ವ್ಯವಹಾರಗಳ ಸಚಿವರು ಡಿಸೆಂಬರ್ 2 ರಂದು ಸಂಸತ್ತಿನಲ್ಲಿ ರಾಜಕೀಯ ಪಕ್ಷಗಳ   ನಾಯಕರನ್ನು ಭೇಟಿಯಾಗಲಿದ್ದಾರೆ


ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 22 ರವರೆಗೆ ನಡೆಯಲಿದೆ

Posted On: 30 NOV 2023 12:14PM by PIB Bengaluru

ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಸರ್ವಪಕ್ಷ ಸಭೆಯು 2ನೇ ಡಿಸೆಂಬರ್ 2023 ರಂದು ನವದೆಹಲಿಯ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4, 2023 ರಂದು ಪ್ರಾರಂಭವಾಗುತ್ತದೆ ಮತ್ತು ಸರ್ಕಾರಿ ವ್ಯವಹಾರದ ಅಗತ್ಯತೆಗಳಿಗೆ ಅನುಸಾರವಾಗಿ ಅಧಿವೇಶನವು ಡಿಸೆಂಬರ್ 22, 2023 ರಂದು ಮುಕ್ತಾಯಗೊಳ್ಳಬಹುದು. 19 ದಿನಗಳ ಅವಧಿಯಲ್ಲಿ ಒಟ್ಟು 15 ಅಧಿವೇಶನಗಳು ನಡೆಯಲಿವೆ.

****


(Release ID: 1981114) Visitor Counter : 118