ಪ್ರಧಾನ ಮಂತ್ರಿಯವರ ಕಛೇರಿ
ಸ್ವೀಡನ್ ಸಾಮ್ರಾಜ್ಯದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
Posted On:
01 DEC 2023 8:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ದುಬೈನಲ್ಲಿ ನಡೆದ ಸಿಒಪಿ 28ರ ನೇಪಥ್ಯದಲ್ಲಿ ಸ್ವೀಡನ್ ಪ್ರಧಾನಿ ಘನತೆವೆತ್ತ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ, ವ್ಯಾಪಾರ ಮತ್ತು ಹೂಡಿಕೆ ಮತ್ತು ಹವಾಮಾನ ಸಹಕಾರ ಸೇರಿದಂತೆ ತಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ನಾಯಕರು ಫಲಪ್ರದ ಚರ್ಚೆ ನಡೆಸಿದರು. ಇಯು, ನಾರ್ಡಿಕ್ ಕೌನ್ಸಿಲ್ ಮತ್ತು ನಾರ್ಡಿಕ್ ಬಾಲ್ಟಿಕ್ 8 ಗ್ರೂಪ್ ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದರು.
ಇಯು ಮಂಡಳಿಯ ಯಶಸ್ವಿ ಅಧ್ಯಕ್ಷತೆಯನ್ನು ಸ್ವೀಡನ್ ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಕ್ರಿಸ್ಟರ್ಸನ್ ಅವರನ್ನು ಅಭಿನಂದಿಸಿದರು.
****
(Release ID: 1982215)
Visitor Counter : 84
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam