ಪ್ರಧಾನ ಮಂತ್ರಿಯವರ ಕಛೇರಿ
ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯನ್ನು ಪ್ರದರ್ಶಿಸುತ್ತವೆ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
30 NOV 2023 7:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ಜಾಗತಿಕವಾಗಿ ಇಂತಹ ಪರೀಕ್ಷಾ ಸಮಯದ ನಡುವೆ ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯನ್ನು ಪ್ರದರ್ಶಿಸುತ್ತವೆ ಎಂದು ಹೇಳಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಎರಡನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ಜಾಗತಿಕವಾಗಿ ಇಂತಹ ಪರೀಕ್ಷಾ ಸಮಯದ ಮಧ್ಯೆ ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯನ್ನು ತೋರಿಸುತ್ತವೆ. ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು, ಬಡತನವನ್ನು ತ್ವರಿತವಾಗಿ ನಿರ್ಮೂಲನೆ ಮಾಡಲು ಮತ್ತು ನಮ್ಮ ಜನರಿಗೆ 'ಸುಗಮ ಜೀವನ'ವನ್ನು ಸುಧಾರಿಸಲು ವೇಗದ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ" ಎಂದು ಹೇಳಿದರು.
*********
(ಪ್ರಕಟಣೆ ಐ.ಡಿ.: 1982235)
ವಿಸಿಟರ್ ಕೌಂಟರ್ : 120
ಪ್ರಕಟಣೆಯನ್ನು ಇದರಲ್ಲಿ ಓದಿ:
Gujarati
,
Manipuri
,
English
,
Urdu
,
Marathi
,
हिन्दी
,
Bengali
,
Assamese
,
Punjabi
,
Odia
,
Tamil
,
Telugu
,
Malayalam