ಪ್ರಧಾನ ಮಂತ್ರಿಯವರ ಕಛೇರಿ
ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಮಹಿಳೆಯರೇ ಪ್ರಮುಖ ಪಾಲುದಾರರು
ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಮಹಿಳಾ ಸ್ವಸಹಾಯ ಗುಂಪಿನಬ ಸದಸ್ಯರು ಮತ್ತು ತರಬೇತಿ ಪಡೆದ ಡ್ರೋನ್ ಪೈಲಟ್ ಜೊತೆ ಸಂವಾದ ನಡೆಸಿದರು
Posted On:
30 NOV 2023 1:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಅವರು ಪ್ರಧಾನ ಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರು ದಿಯೋಘರ್ ನ ಏಮ್ಸ್ನಲ್ಲಿ ಮೈಲಿಗಲ್ಲಾದ 10,000ನೇ ಜನೌಷದಿ ಕೇಂದ್ರವನ್ನು ಉದ್ಘಾಟಿಸಿದರು. ಇದಲ್ಲದೆ, ಶ್ರೀ ಮೋದಿ ಅವರು ದೇಶದಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಪ್ರಧಾನಮಂತ್ರಿಯವರು ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಡ್ರೋನ್ಗಳನ್ನು ಒದಗಿಸುವ ಮತ್ತು ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸುವ ಉಪಕ್ರಮಗಳನ್ನು ಘೋಷಿಸಿದ್ದರು. ಈ ಕಾರ್ಯಕ್ರಮವು ಈ ಎರಡೂ ಭರವಸೆಗಳ ನೆರವೇರಿಕೆಯನ್ನು ಸೂಚಿಸುತ್ತದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಸ್ವಸಹಾಯ ಸಂಘದ ಸದಸ್ಯೆ ಕೊಮ್ಲಪಾಟಿ ವೆಂಕಟ ರವಣಮ್ಮ ಅವರು ಕೃಷಿ ಉದ್ದೇಶಕ್ಕಾಗಿ ಡ್ರೋನ್ಗಳನ್ನು ಹಾರಿಸಲು ಕಲಿತ ಅನುಭವವನ್ನು ಹಂಚಿಕೊಂಡರು. ಡ್ರೋನ್ ಹಾರಾಟದ ತರಬೇತಿಯನ್ನು ಪೂರ್ಣಗೊಳಿಸಲು ತನಗೆ 12 ದಿನಗಳು ಬೇಕಾಯಿತು ಎಂದು ಅವರು ಪ್ರಧಾನಮಂತ್ರಿಯವರಿಗೆ ತಿಳಿಸಿದರು.
ಹಳ್ಳಿಗಳಲ್ಲಿ ಕೃಷಿಗೆ ಡ್ರೋನ್ಗಳನ್ನು ಬಳಸುವುದರಿಂದ ಆಗುವ ಪರಿಣಾಮಗಳ ಕುರಿತು ಕೊಮ್ಲಪಾಟಿ ವೆಂಕಟ ರವಣಮ್ಮ ಅವರನ್ನು ಪ್ರಧಾನಮಂತ್ರಿಯವರು ಕೇಳಿದಾಗ, ಇದರಿಂದ ಸಮಯದ ಉಳಿತಾಯವಾಗುತ್ತದೆ ಮತ್ತು ನೀರಿನ ಸಮಸ್ಯೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಭಾರತದ ಮಹಿಳೆಯರ ಶಕ್ತಿಯನ್ನು ಅನುಮಾನಿಸುವವರಿಗೆ ಶ್ರೀಮತಿ ವೆಂಕಟ ಅವರಂತಹ ಮಹಿಳೆಯರು ಉದಾಹರಣೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಡ್ರೋನ್ ಬಳಕೆ ಮಹಿಳಾ ಸಬಲೀಕರಣದ ಸಂಕೇತವಾಗಿ ಹೊರಹೊಮ್ಮಲಿದೆ ಎಂದರು. ವಿಕಾಸ ಭಾರತ ಸಂಕಲ್ಪ ಯಾತ್ರೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಅವರು ಒತ್ತಿ ಹೇಳಿದರು.
*****
(Release ID: 1982251)
Visitor Counter : 105
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam