ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಿಸ್ ಒಕ್ಕೂಟದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಸಭೆ

प्रविष्टि तिथि: 01 DEC 2023 8:01PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರೊಂದಿಗೆ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಶ್ರೀ ಅಲೈನ್ ಬರ್ಸೆಟ್ ದ್ವಿಪಕ್ಷೀಯ ಸಭೆ ನಡೆಸಿದರು.  , 1 ಡಿಸೆಂಬರ್ 2023 ರಂದು, ದುಬೈನಲ್ಲಿ COP 28ರ ನೇಪಥ್ಯದಲ್ಲಿ ಈ ಸಭೆ ನಡೆಸಿದರು.

ಸಭೆಯಲ್ಲಿ, ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಐಟಿ, ಪ್ರವಾಸೋದ್ಯಮ ಮತ್ತು ಜನರೊಂದಿಗೆ ಜನರ ಬಾಂಧವ್ಯದಲ್ಲಿ ಸಹಕಾರ ಸೇರಿದಂತೆ ತಮ್ಮ ಪಾಲುದಾರಿಕೆಯನ್ನು ಇನ್ನಷ್ಟು ವೃದ್ಧಿಸುವ  ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದವು.

ಭಾರತದ G20 ಪ್ರೆಸಿಡೆನ್ಸಿ ಮತ್ತು ಶೃಂಗಸಭೆಯ ಯಶಸ್ಸಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಬರ್ಸೆಟ್ ಅಭಿನಂದಿಸಿದರು.

****


(रिलीज़ आईडी: 1982257) आगंतुक पटल : 111
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam