ಪ್ರಧಾನ ಮಂತ್ರಿಯವರ ಕಛೇರಿ
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ
Posted On:
01 DEC 2023 7:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 1 ಡಿಸೆಂಬರ್ 2023 ರಂದು ಯುಎಇಯಲ್ಲಿ COP-28 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
COP-28 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರನ್ನು ಅಭಿನಂದಿಸಿದರು. COP-28 ನಲ್ಲಿ ಹಸಿರು ಹವಾಮಾನ ಕಾರ್ಯಕ್ರಮದ (GCP) ಉನ್ನತ ಮಟ್ಟದ ಕಾರ್ಯಕ್ರಮವನ್ನು ಸಹ ಆಯೋಜಿಸಿದ್ದಕ್ಕಾಗಿ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಧನ್ಯವಾದ ಅರ್ಪಿಸಿದರು.
ಇಬ್ಬರೂ ನಾಯಕರು ತಮ್ಮ ವಿಶಾಲ ವ್ಯಾಪ್ತಿಯ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು. ಅವರು ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆಯೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ವೈಬ್ರೆಂಟ್ ಗುಜರಾತ್ ಶೃಂಗಸಭೆಗೆ ಆಗಮಿಸುವಂತೆ ಅಧ್ಯಕ್ಷ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಆಹ್ವಾನಿಸಿದರು.
******
(Release ID: 1982258)
Visitor Counter : 88
Read this release in:
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam