ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಮಿಜೋರಂ ಚುನಾವಣೆ: ಶ್ರೀ ಲಾಲ್ದುಹೋಮ ಮತ್ತು ಅವರ ಪಕ್ಷ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಗೆ ಪ್ರಧಾನಿ ಮೋದಿ ಅಭಿನಂದನೆ

ಪ್ರಕಟಣಾ ದಿನಾಂಕ: 04 DEC 2023 8:10PM by PIB Bengaluru

ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಶ್ರೀ ಲಾಲ್ದುಹೋಮ ಮತ್ತು ಅವರ ಪಕ್ಷ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಿಜೋರಾಂ ಪ್ರಗತಿಯನ್ನು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನೂ ನೀಡುವುದಾಗಿ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಆಶ್ವಾಸನೆ ನೀಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಅದರ ಮುಖ್ಯಸ್ಥ ಶ್ರೀ ಲಾಲ್ದುಹೋಮ ಅವರಿಗೆ ಅಭಿನಂದನೆಗಳು. ಮಿಜೋರಾಂ ಪ್ರಗತಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ನೀಡುತ್ತೇವೆ'' ಎಂದು ಬರೆದುಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1982688) ವಿಸಿಟರ್ ಕೌಂಟರ್ : 129