ಪ್ರಧಾನ ಮಂತ್ರಿಯವರ ಕಛೇರಿ
ಮಿ(ಮೈ)ಚಾಂಗ್ ಚಂಡಮಾರುತದಿಂದ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ಸಂತಾಪ
प्रविष्टि तिथि:
06 DEC 2023 12:37PM by PIB Bengaluru
ಮಿಚಾಂಗ್ ಚಂಡಮಾರುತದಿಂದ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಚಂಡಮಾರುತದಲ್ಲಿ ಗಾಯಗೊಂಡವರು ಅಥವಾ ಹಾನಿಗೊಳಗಾದವರಿಗಾಗಿ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದರು. ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳು ಬಾಧಿತ ಪ್ರದೇಶಗಳಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ಅವರು ತಮ್ಮ ಕೆಲಸ ಮುಂದುವರೆಸುತ್ತಾರೆ ಎಂದು ಹೇಳಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ;
“ಮಿಚಾಂಗ್ ಚಂಡಮಾರುತದಿಂದಾಗಿ ವಿಶೇಷವಾಗಿ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಪುದುಚೇರಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳ ನೋವಿನೊಂದಿಗೆ ನಾನಿದ್ದೇನೆ. ಈ ಚಂಡಮಾರುತದಿಂದ ಗಾಯಗೊಂಡವರು ಅಥವಾ ಹಾನಿ ಎದುರಿಸಿದ ಸಂತ್ರಸ್ತರು ಕೂಡಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳು ಬಾಧಿತ ಪ್ರದೇಶಗಳಲ್ಲಿ ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ಸಾಮಾನ್ಯಕ್ಕೆ ಬರುವ ತನಕ ಅವರು ತಮ್ಮ ಕೆಲಸ ಮುಂದುವರಿಸುತ್ತಾರೆ” ಎಂದಿದ್ದಾರೆ.
***
(रिलीज़ आईडी: 1983044)
आगंतुक पटल : 113
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam