ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಕಸಿತ  ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಡಿಸೆಂಬರ್ 9 ರಂದು ಪ್ರಧಾನಮಂತ್ರಿಯವರು ಸಂವಾದ ನಡೆಸಲಿದ್ದಾರೆ


ವಿಕಸಿತ  ಭಾರತ ಸಂಕಲ್ಪ ಯಾತ್ರೆಯ ದೇಶಾದ್ಯಂತ ಸಾವಿರಾರು ಫಲಾನುಭವಿಗಳು ವಿಡಿಯೊ ಸಮಾವೇಶ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ 

प्रविष्टि तिथि: 07 DEC 2023 7:58PM by PIB Bengaluru

ವಿಕಸಿತ  ಭಾರತ ಸಂಕಲ್ಪ ಯಾತ್ರೆಯ (ವಿ.ಬಿ.ಎಸ್.ವೈ.) ಫಲಾನುಭವಿಗಳೊಂದಿಗೆ 9ನೇ ಡಿಸೆಂಬರ್, 2023 ರಂದು ಮಧ್ಯಾಹ್ನ 12:30 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ವಿಕಸಿತ  ಭಾರತ ಸಂಕಲ್ಪ ಯಾತ್ರೆಯ ದೇಶಾದ್ಯಂತ ಸಾವಿರಾರು ಫಲಾನುಭವಿಗಳು ವಿಡಿಯೊ ಸಮಾವೇಶ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶಾದ್ಯಂತದ ಎರಡು ಸಾವಿರಕ್ಕೂ ಹೆಚ್ಚು ವಿ.ಬಿ.ಎಸ್.ವೈ. ವ್ಯಾನ್ಗಳು, ಸಾವಿರಾರು ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು) ಮತ್ತು ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್ಸಿ) ಸಹ ಸೇರವಾಗಿ ಕಾರ್ಯಕ್ರಮದಲ್ಲಿ ಸಂಪರ್ಕಗೊಳ್ಳುತ್ತವೆ. ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಕಸಿತ  ಭಾರತ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ಕೈಗೊಳ್ಳಲಾಗುತ್ತಿದ್ದು, ಈ ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಸಮಯಕ್ಕೆ ಅನುಗುಣವಾಗಿ ತಲುಪುವುದನ್ನು ಖಾತ್ರಿಪಡಿಸುವ ಮೂಲಕ ಕೇಂದ್ರ ಸರ್ಕಾರದ  ಪ್ರಮುಖ ಯೋಜನೆಗಳ ಅನುಷ್ಠಾನದ ಖಾತ್ರಿಯನ್ನು ಸಾಧಿಸುವ ಗುರಿಯನ್ನು ಕೂಡಾ ಹೊಂದಿದೆ.

*****


(रिलीज़ आईडी: 1983833) आगंतुक पटल : 126
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Bengali-TR , Bengali , Manipuri , Punjabi , Gujarati , Odia , Tamil , Telugu , Malayalam