ಪ್ರಧಾನ ಮಂತ್ರಿಯವರ ಕಛೇರಿ

ಫ್ರಾನ್ಸ್ ನ ಸೆರ್ಗಿಯಲ್ಲಿರುವ ತಿರುವಳ್ಳುವರ್ ಪ್ರತಿಮೆ ಫ್ರಾನ್ಸ್ ಮತ್ತು ಭಾರತದ ನಡುವಿನ ಸಾಂಸ್ಕೃತಿಕ ಬಾಂಧವ್ಯ ಹಂಚಿಕೆಯ ಸುಂದರ ಸಂಕೇತವಾಗಿದೆ: ಪ್ರಧಾನಿ

Posted On: 10 DEC 2023 8:10PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಫ್ರಾನ್ಸ್ ನ ಸೆರ್ಗಿಯಲ್ಲಿರುವ ತಿರುವಳ್ಳುವರ್ ಪ್ರತಿಮೆ ಫ್ರಾನ್ಸ್ ಮತ್ತು ಭಾರತದ ನಡುವಿನ ಸಾಂಸ್ಕೃತಿಕ ಬಾಂಧವ್ಯ ವಿನಿಮಯದ ಸುಂದರ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ಫ್ರಾನ್ಸ್ ನ ಸೆರ್ಗಿಯಲ್ಲಿ ತಿರುವಳ್ಳುವರ್ ಪ್ರತಿಮೆ ಉದ್ಘಾಟನೆಯ ಕುರಿತು ಫ್ರಾನ್ಸ್ ನ ಸೆರ್ಗಿಯ ಮೇಯರ ಜೀನ್-ಪಾಲ್ ಜೀಂಡನ್ ಅವರು ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಜೀನ್-ಪಾಲ್ ಜೀಂಡನ್ ಅವರ ಸಾಮಾಜಿಕ ಜಾಲತಾಣ X ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ;

“ಫ್ರಾನ್ಸ್ ನ ಸೆರ್ಗಿಯಲ್ಲಿರುವ ತಿರುವಳ್ಳುವರ್ ಪ್ರತಿಮೆಯು ನಮ್ಮ ಸಾಂಸ್ಕೃತಿಕ ಬಾಂಧವ್ಯಗಳ ವಿನಿಯಮದ  ಸುಂದರವಾದ ಸಂಕೇತವಾಗಿದೆ. ತಿರುವಳ್ಳುವರ್ ಬುದ್ಧಿವಂತಿಕೆ ಮತ್ತು ಜ್ಞಾನದ ಸಂಕೇತವಾಗಿ ಅತ್ಯಂತ ಎತ್ತರದ ಸ್ಥಾನದಲ್ಲಿ ನಿಂತಿದ್ದಾರೆ. ಅವರ ಬರಹಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ’’

“பிரான்சின் செர்ஜியில் உள்ள திருவள்ளுவர் சிலை, நமது கலாச்சாரப் பிணைப்புகளுக்கு அழகான ஒரு சான்றாகும். திருவள்ளுவர் ஞானம் மற்றும் அறிவின் அடையாளமாக உயர்ந்து நிற்கிறார். அவரது எழுத்துக்கள் உலகம் முழுவதும் உள்ள லட்சக் கணக்கானவர்களை ஊக்குவிக்கின்றன.”
 

***



(Release ID: 1984985) Visitor Counter : 49