ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
13 DEC 2023 2:01PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರನ್ನು ಅಭಿನಂದಿಸಿದರು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರನ್ನು ಸಹ ಪ್ರಧಾನಮಂತ್ರಿಯವರು ಅಭಿನಂದಿಸಿದರು.
ಪ್ರಧಾನ ಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ :
“ದೇಶದ ಹೃದಯ ಭಾಗವಾಗಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಮತ್ತು ಉಪಮುಖ್ಯಮಂತ್ರಿಗಳಾದ ಜಗದೀಶ ದೇವ್ರಾ ಜಿ ಮತ್ತು ರಾಜೇಂದ್ರ ಶುಕ್ಲಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವು ದುಪ್ಪಟ್ಟು ಉತ್ಸಾಹದಿಂದ ಕೆಲಸ ಮಾಡುತ್ತದೆ ಮತ್ತು ಅಭಿವೃದ್ಧಿಯ ಹೊಸ ಮಾದರಿಗಳನ್ನು ರಚಿಸುತ್ತದೆ ಎಂದು ನನಗೆ ಖಾತ್ರಿಯಿದೆ.. ಈ ಸಂದರ್ಭದಲ್ಲಿ, ಬಿಜೆಪಿ ಸರ್ಕಾರವು ಜನರ ಜೀವನವನ್ನು ಸುಲಭಗೊಳಿಸಲು ಸರ್ವ ಪ್ರಯತ್ನವನ್ನು ಮಾಡುತ್ತದೆ ಎಂದು ನಾನು ಇಲ್ಲಿ ನನ್ನ ಎಲ್ಲಾ ಕುಟುಂಬದ ಸದಸ್ಯರಿಗೆ ಭರವಸೆ ನೀಡುತ್ತೇನೆ.
***
(रिलीज़ आईडी: 1985928)
आगंतुक पटल : 76
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam