ಪ್ರಧಾನ ಮಂತ್ರಿಯವರ ಕಛೇರಿ
ಕೇಂದ್ರೀಯ ವಿದ್ಯಾಲಯದ ವಜ್ರಮಹೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ, ಸಹಾಯಕ ಸಿಬ್ಬಂದಿ ಮತ್ತು ಹಳೆಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಕೇಂದ್ರೀಯ ವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸಿವೆ: ಪ್ರಧಾನಮಂತ್ರಿ
Posted On:
15 DEC 2023 4:18PM by PIB Bengaluru
ಕೇಂದ್ರೀಯ ವಿದ್ಯಾಲಯದ ವಜ್ರ ಮಹೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಹಾಯಕ ಸಿಬ್ಬಂದಿ ಮತ್ತು ಹಳೆಯ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
“ಕೇಂದ್ರೀಯ ವಿದ್ಯಾಲಯ ಕುಟುಂಬದ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ, ಸಹಾಯಕ ಸಿಬ್ಬಂದಿ ಮತ್ತು ಹಳೆಯ ವಿದ್ಯಾರ್ಥಿಗಳಿಗೆ ಅವರ ವಜ್ರ ಮಹೋತ್ಸವದ ಶುಭಾಶಯಗಳು! ಈ ಗೌರವಾನ್ವಿತ ಶೈಕ್ಷಣಿಕ ಸಮುದಾಯದ ಗಮನಾರ್ಹ ಸಾಧನೆಗಳನ್ನು ಸಂಭ್ರಮಿಸಲು ಮತ್ತು ಪ್ರಶಂಸಿಸಲು ಇದು ಒಂದು ಸುಸಂದರ್ಭವಾಗಿದೆ. ಕಳೆದ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಕೇಂದ್ರೀಯ ವಿದ್ಯಾಲಯಗಳು ಪ್ರಮುಖ ಪಾತ್ರವಹಿಸಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಸಮಗ್ರ ಅಭಿವೃದ್ಧಿಗೆ ಕೇಂದ್ರೀಯ ವಿದ್ಯಾಲಯದ ಕೊಡುಗೆ ನಿಜವಾಗಿಯೂ ಶ್ಲಾಘನೀಯವಾಗಿದೆ.
***
(Release ID: 1986751)
Visitor Counter : 91
Read this release in:
English
,
Urdu
,
Marathi
,
Hindi
,
Bengali-TR
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam