ಸಂಪುಟ

ಡಿಜಿಟಲೀಕರಣ ಮತ್ತು ವಿದ್ಯುನ್ಮಾನ ಉತ್ಪಾದನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಅಂಕಿತ ಹಾಕಲಾದ ಸಹಕಾರ ಒಪ್ಪಂದಕ್ಕೆ ಸಂಪುಟದ ಅನುಮೋದನೆ

Posted On: 15 DEC 2023 7:36PM by PIB Bengaluru

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಭಾರತ ಗಣರಾಜ್ಯದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಸೌದಿ ಅರೇಬಿಯಾದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಡುವೆ ಡಿಜಿಟಲೀಕರಣ ಮತ್ತು ವಿದ್ಯುನ್ಮಾನ ಉತ್ಪಾದನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ 2023ರ ಆಗಸ್ಟ್ 18ರಂದು ಅಂಕಿತ ಹಾಕಲಾದ ಸಹಕಾರ ಒಪ್ಪಂದದ ಬಗ್ಗೆ ವಿವರಿಸಲಾಯಿತು.

ಈ ಸಹಕಾರ ಒಪ್ಪಂದವು ಡಿಜಿಟಲೀಕರಣ, ವಿದ್ಯುನ್ಮಾನ ಉತ್ಪಾದನೆ, ಇ-ಆಡಳಿತ, ಸ್ಮಾರ್ಟ್ ಮೂಲಸೌಕರ್ಯ, ಇ-ಆರೋಗ್ಯ ಮತ್ತು ಇ-ಶಿಕ್ಷಣ ಕ್ಷೇತ್ರದಲ್ಲಿ ಸಹಯೋಗವನ್ನು ಬಲಪಡಿಸಲು, ಡಿಜಿಟಲ್ ನಾವೀನ್ಯತೆಯಲ್ಲಿ ಸಂಶೋಧನೆಯಲ್ಲಿ ಪಾಲುದಾರಿಕೆಯನ್ನು ಉತ್ತೇಜಿಸಲು ಮತ್ತು ಕೃತಕ ಬುದ್ಧಿಮತ್ತೆ (ಎಐ), ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ), ರೋಬೋಟ್ ಗಳು, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬ್ಲಾಕ್ ಚೈನ್ ಮುಂತಾದ ಉದಯೋನ್ಮುಖ ತಂತ್ರಜ್ಞಾನಗಳ ಬಳಕೆಯನ್ನು ಉತ್ತೇಜಿಸಲು ಉದ್ದೇಶಿಸಿದೆ. ಈ ತಿಳಿವಳಿಕೆ ಒಪ್ಪಂದವು ಡಿಜಿಟಲೀಕರಣ ಮತ್ತು ವಿದ್ಯುನ್ಮಾನ ಉತ್ಪಾದನೆ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ಚೌಕಟ್ಟನ್ನು ಸ್ಥಾಪಿಸುತ್ತದೆ ಮತ್ತು ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಸಹಭಾಗಿತ್ವವನ್ನು ಸ್ಥಾಪಿಸುತ್ತದೆ.

ಡಿಜಿಟಲೀಕರಣ ಮತ್ತು ವಿದ್ಯುನ್ಮಾನ ಉತ್ಪಾದನೆಯಲ್ಲಿ ಇ-ಬೋಧನೆ, ಇ-ಕಲಿಕೆ ಮತ್ತು ವಿನಿಮಯ ಕಾರ್ಯಕ್ರಮಗಳ ಮೂಲಕ ನವೀನ ತರಬೇತಿ ಮತ್ತು ಅಭಿವೃದ್ಧಿಯ ಮಾರ್ಗಗಳನ್ನು ಉತ್ತೇಜಿಸುವುದು ಮತ್ತು ಸಾಮರ್ಥ್ಯ ವರ್ಧನೆ ಮತ್ತು ಹೆಚ್ಚು ನುರಿತ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ವೃತ್ತಿಪರರಿಗೆ ಪ್ರವೇಶಕ್ಕಾಗಿ ಜಂಟಿ ತರಬೇತಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವುದು, ವ್ಯವಹಾರ ವೇಗವರ್ಧಕಗಳು, ಸಾಹಸೋದ್ಯಮ ಬಂಡವಾಳ ಮತ್ತು ತಂತ್ರಜ್ಞಾನ ಸ್ಟಾರ್ಟ್ ಅಪ್ ಗಳ ಇನ್ಕ್ಯುಬೇಟರ್ ಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಎಸ್ ಎಂಇ ಮತ್ತು ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು ಈ ತಿಳಿವಳಿಕೆ ಒಪ್ಪಂದದ ಉದ್ದೇಶವಾಗಿದೆ. ಎರಡೂ ಪಕ್ಷಗಳಿಗೆ ಉದ್ಯೋಗಾವಕಾಶಗಳು.

ಈ ತಿಳಿವಳಿಕೆ ಒಪ್ಪಂದದ ಅಡಿಯಲ್ಲಿನ ಸಹಯೋಗ ಚಟುವಟಿಕೆಗಳು ಆತ್ಮನಿರ್ಭರ ಭಾರತದ ಉದ್ದೇಶಿತ ಉದ್ದೇಶಗಳಿಗೆ ಅವಿಭಾಜ್ಯವಾದ ಡಿಜಿಟಲೀಕರಣ ಮತ್ತು ವಿದ್ಯುನ್ಮಾನ ಉತ್ಪಾದನೆ ಕ್ಷೇತ್ರದಲ್ಲಿ ಸಹಕಾರವನ್ನು ಉತ್ತೇಜಿಸುತ್ತವೆ.



(Release ID: 1986954) Visitor Counter : 60