ಕೃಷಿ ಸಚಿವಾಲಯ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಅರ್ಜುನ್ ಮುಂಡಾ ಅವರು ಇಂದು ಜಾರ್ಖಂಡ್ ನಿಂದ ವಿಬಿಎಸ್ ವೈಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಆನ್ ಲೈನ್ ನಲ್ಲಿ ಸಂವಾದ ನಡೆಸಿದರು
प्रविष्टि तिथि:
16 DEC 2023 7:17PM by PIB Bengaluru
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಶ್ರೀ ಅರ್ಜುನ್ ಮುಂಡಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ತಮ್ಮ ಖುಂಟಿ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಾರ್ಖಂಡ್ ನ ಎಡಲ್ಹತು ಪಂಚಾಯತ್ ನಲ್ಲಿ ಬುಂಡು ಬ್ಲಾಕ್ ನಿವಾಸಿಗಳೊಂದಿಗೆ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಆನ್ ಲೈನ್ ನಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಗೆ ಹಸಿರು ನಿಶಾನೆ ತೋರಿದರು . ದೇಶಾದ್ಯಂತದ ಸಾವಿರಾರು ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳು ಪ್ರಧಾನಮಂತ್ರಿಯವರೊಂದಿಗೆ ಆನ್ ಲೈನ್ ಸಂವಾದದ ಭಾಗವಾಗಿದ್ದರು.

ಸರ್ಕಾರದ ಪ್ರಮುಖ ಯೋಜನೆಗಳ ಪರಿಪೂರ್ಣತೆಯನ್ನು ಸಾಧಿಸುವ ಉದ್ದೇಶದಿಂದ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯನ್ನು ದೇಶಾದ್ಯಂತ ಕೈಗೊಳ್ಳಲಾಗುತ್ತಿದ್ದು, ಈ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಕಾಲಮಿತಿಯೊಳಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.

(रिलीज़ आईडी: 1987264)
आगंतुक पटल : 103