ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ 

Posted On: 16 DEC 2023 9:39PM by PIB Bengaluru

ಕುವೈತ್ ರಾಜ್ಯದ ಅಮೀರ್ ಆದ ಹಿಸ್ ಹೈನೆಸ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,

"ಹಿಸ್ ಹೈನೆಸ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ನಿಧನದ ವಾರ್ತೆ ಕೇಳಿ ತುಂಬಾ ದುಃಖವಾಗಿದೆ. ಈ ಸಂದರ್ಭದಲ್ಲಿ ಕುವೈತ್ ರಾಜಮನೆತನಕ್ಕೆ, ನಾಯಕತ್ವಕ್ಕೆ ಮತ್ತು ಕುವೈತ್ ಜನರಿಗೆ ನಮ್ಮ ಆಳವಾದ ಸಂತಾಪವನ್ನು ತಿಳಿಸುತ್ತೇವೆ." ಎಂದು ಬರೆದುಕೊಂಡಿದ್ದಾರೆ.

***


(Release ID: 1987614) Visitor Counter : 69