ಪ್ರಧಾನ ಮಂತ್ರಿಯವರ ಕಛೇರಿ
ಡಿಸೆಂಬರ್ 16 ರಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
ಐದು ರಾಜ್ಯಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಹಸ್ರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಒಟ್ಟುಗೂಡಲಿದ್ದಾರೆ
Posted On:
15 DEC 2023 7:40PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 r ಡಿಸೆಂಬರ್ 16 ರಂದು ಸಂಜೆ 4 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಫಲಾನುಭವಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸ್ ಘಡ, ತೆಲಂಗಾಣ ಮತ್ತು ಮಿಝೋರಾಮ್ ರಾಜ್ಯಗಳ ಸಂಕಲ್ಪ ಯಾತ್ರೆಗೆ ಹಸಿರು ನಿಶಾನೆ ತೋರಲಿದ್ದಾರೆ.
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಹಸ್ರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಒಟ್ಟುಗೂಡಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶಾದ್ಯಂತ ಕೈಗೊಳ್ಳುತ್ತಿದ್ದು, ಯೋಜನೆಗಳ ಪ್ರಯೋಜನವನ್ನು ಫಲಾನುಭವಿಗಳಿಗೆ ಸಮಯಕ್ಕೆ ಅನುಗುಣವಾಗಿ ತಲುಪುವುದನ್ನು ಖಾತ್ರಿಪಡಿಸುವ ಗುರಿ ಸಾಧನೆಯನ್ನು ಇದು ಒಳಗೊಂಡಿದೆ.
***
(Release ID: 1987634)
Visitor Counter : 89
Read this release in:
Tamil
,
Assamese
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Gujarati
,
Odia
,
Telugu
,
Malayalam