ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಇಸ್ರೇಲ್ ಪ್ರಧಾನ ಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ


ಇಸ್ರೇಲ್-ಹಮಾಸ್ ಸಂಘರ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರಧಾನಿ ನೆತನ್ಯಾಹು ಅವರು ಪ್ರಧಾನ ಮಂತ್ರಿಗಳಿಗೆ ವಿವರ ನೀಡಿದರು

 ಸಮುದ್ರ ಸಂಚಾರದ ಸುರಕ್ಷತೆಯ ಸವಾಲುಗಳ ಕುರಿತು ಅಭಿಪ್ರಾಯ ಹಂಚಿಕೊಂಡ ಉಭಯ ನಾಯಕರು

ಮಾನವೀಯ ನೆರವು, ಮಾತುಕತೆ-  ಸಂವಾದ ಹಾಗೂ ರಾಜತಾಂತ್ರಿಕತೆಯ ಮೂಲಕ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯದ ಬಗ್ಗೆ ಪ್ರಧಾನ ಮಂತ್ರಿಗಳಿಂದ ಪುನರುಚ್ಛಾರ

प्रविष्टि तिथि: 19 DEC 2023 6:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ದೂರವಾಣಿ ಕರೆ ಮಾಡಿದ್ದ ಇಸ್ರೇಲ್ ಪ್ರಧಾನ ಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್-ಹಮಾಸ್ ಸಂಘರ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ವಿವರಿಸಿದರು.

ಉಭಯ ನಾಯಕರು ಸಮುದ್ರ ಸಂಚಾರದ ಸುರಕ್ಷತೆಯ ಬಗ್ಗೆ ಕಳವಳಗಳನ್ನೂ ಹಂಚಿಕೊಂಡರು.

ಸಂಘರ್ಷದಲ್ಲಿ ಸಂತ್ರಸ್ತರಾದವರಿಗೆ ನಿರಂತರ ಮಾನವೀಯ ನೆರವಿನ ಅಗತ್ಯವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು. ಹಾಗೆಯೇ ಮಾತುಕತೆ, ರಾಜತಾಂತ್ರಿಕತೆ ಮೂಲಕ ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಸೇರಿದಂತೆ ಸಂಘರ್ಷದ ಆರಂಭಿಕ ಮತ್ತು ಶಾಂತಿಯುತ ಪರಿಹಾರಕ್ಕೆ ಒತ್ತು ನೀಡುವಂತೆಯೂ ಸಲಹೆ ನೀಡಿದರು.

ಜತೆಗೆ ಉಭಯ ನಾಯಕರು ನಿರಂತರ ಸಂಪರ್ಕದಲ್ಲಿರಲು ಸಮ್ಮತಿಸಿದರು.

*****


(रिलीज़ आईडी: 1988562) आगंतुक पटल : 135
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam