ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕರ್ನಾಟಕದ ಜೆಡಿಎಸ್ ಅಧ್ಯಕ್ಷ ಹಾಗೂ ಎಚ್ .ಡಿ.ರೇವಣ್ಣ ಅವರನ್ನು ಭೇಟಿ ಮಾಡಿದ ಪ್ರಧಾನಿ

प्रविष्टि तिथि: 21 DEC 2023 12:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ಎಚ್.ಡಿ. ದೇವೇಗೌಡ, ಕರ್ನಾಟಕದ ಜೆಡಿಎಸ್ ಅಧ್ಯಕ್ಷ ಶ್ರೀ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶ್ರೀ ಎಚ್ .ಡಿ.ರೇವಣ್ಣ ಅವರನ್ನು ಭೇಟಿ ಮಾಡಿದರು.

ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿರುವುದಕ್ಕಾಗಿ ಅವರು ಮಾಜಿ ಪ್ರಧಾನಿಯವರನ್ನು ಶ್ಲಾಘಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“ಮಾಜಿ ಪ್ರಧಾನಿ ಶ್ರೀ ಎಚ್ ಡಿ ದೇವೇಗೌಡ, ಶ್ರೀ ಎಚ್ ಡಿ ಕುಮಾರಸ್ವಾಮಿ ಮತ್ತು ಶ್ರೀ ಹೆಚ್ ಡಿ ರೇವಣ್ಣ ಜಿ ಅವರನ್ನು ಭೇಟಿಯಾಗಲು ಸದಾ ಸಂತೋಷವಾಗುತ್ತದೆ.

ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳ ಚೆನ್ನಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ ವಿಷಯಗಳ ಕುರಿತು ಅವರ ಚಿಂತನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದವುಗಳಾಗಿವೆ"

 

***


(रिलीज़ आईडी: 1989137) आगंतुक पटल : 194
इस विज्ञप्ति को इन भाषाओं में पढ़ें: Bengali , English , Urdu , हिन्दी , Marathi , Manipuri , Assamese , Punjabi , Gujarati , Odia , Tamil , Telugu , Malayalam