ಸಂಪುಟ
azadi ka amrit mahotsav

ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಭಾರತದ ಕಾನ್ಸುಲೇಟ್ ಜನರಲ್ ತೆರೆಯಲು ಸಂಪುಟದ ಅನುಮೋದನೆ

प्रविष्टि तिथि: 27 DEC 2023 3:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಭಾರತದ ಕಾನ್ಸುಲೇಟ್ ಜನರಲ್ ತೆರೆಯುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ.

ಆಕ್ಲೆಂಡ್ ನಲ್ಲಿ ಭಾರತದ ಕಾನ್ಸುಲೇಟ್ ಜನರಲ್ ತೆರೆಯುವುದು ಭಾರತದ ರಾಜತಾಂತ್ರಿಕ ಹೆಜ್ಜೆಗುರುತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಭಾರತದ ಹೆಚ್ಚುತ್ತಿರುವ ಜಾಗತಿಕ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಭಾರತದ ರಾಜತಾಂತ್ರಿಕ ಪ್ರಾತಿನಿಧ್ಯವನ್ನು ಬಲಪಡಿಸುತ್ತದೆ. ಇದು ಭಾರತದ ಕಾರ್ಯತಂತ್ರದ ಮತ್ತು ವಾಣಿಜ್ಯ ಹಿತಾಸಕ್ತಿಗಳನ್ನು ಉತ್ತೇಜಿಸಲು ಮತ್ತು ಆಕ್ಲೆಂಡ್ ನಲ್ಲಿರುವ ಭಾರತೀಯ ಸಮುದಾಯದ ಕಲ್ಯಾಣಕ್ಕೆ ಉತ್ತಮ ಸೇವೆ ಸಲ್ಲಿಸಲು ಸಹಾಯ ಮಾಡುತ್ತದೆ.

ಕಾನ್ಸುಲೇಟ್ ಅನ್ನು 12 ತಿಂಗಳ ಕಾಲಮಿತಿಯೊಳಗೆ ತೆರೆಯುವ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.

*****


(रिलीज़ आईडी: 1990904) आगंतुक पटल : 125
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam