ಪ್ರಧಾನ ಮಂತ್ರಿಯವರ ಕಛೇರಿ
75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿರುವ ಪ್ರಧಾನಮಂತ್ರಿಗಳು
Posted On:
22 DEC 2023 11:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 75ನೇ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ.
ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು "ಎಕ್ಸ್" ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿಗಳು,
“ನನ್ನ ಆತ್ಮೀಯ ಸ್ನೇಹಿತರಾದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಸ್ವೀಕರಿಸಲು ನಾವು ಕಾತುರದಿಂದ ಎದುರು ನೋಡುತ್ತಿದ್ದೇವೆ. ನಾವು ಭಾರತ-ಫ್ರಾನ್ಸ್ ಸಹಭಾಗಿತ್ವದ ಕಾರ್ಯತಂತ್ರದ ಪಾಲುದಾರಿಕೆಯನ್ನು ಸಂಭ್ರಮಿಸುವ ಜತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ನಂಬಿಕೆಯನ್ನು ಹಂಚಿಕೊಂಡಿದ್ದೇವೆ. ಬಿಯೆಂಟಾಟ್!" ಎಂದು ಹೇಳಿದ್ದಾರೆ.
*****
(Release ID: 1991134)
Visitor Counter : 66
Read this release in:
Marathi
,
Tamil
,
Telugu
,
Malayalam
,
Bengali
,
Assamese
,
Manipuri
,
English
,
Urdu
,
Hindi
,
Punjabi
,
Gujarati
,
Odia